ಕುಂದಾಪುರ: ಗಂಗೊಳ್ಳಿಯ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 100 ವರ್ಷಗಳ ಇತಿಹಾಸವಿದೆ. ಶುಕ್ರವಾರ ಶಾಲೆಯ ನೂತನ ರಂಗ ಮಂಟಪದ ಉದ್ಘಾಟನೆ ಸಮಾರಂಭ ಜರುಗಿತು.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ರಂಗ ಮಂಟಪವನ್ನು ಉದ್ಘಾಟಿಸಿ ಮಾತನಾಡಿ, ಕೊರೊನಾ ಹಾವಳಿಯ ನಂತರ ಸರಕಾರಿ ಶಾಲೆ ಸೇರ್ಪಡೆಗೆ ಹೆತ್ತವರು ಹೆಚ್ಚು ಆಸಕ್ತಿ ತೋರುತ್ತಿದ್ದು, ಇದು ಆಶಾದಾಯಕ ಬೆಳವಣಿಗೆ ಎಂದರು.
ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಶಾಲೆ ಮೂಲ ಸೌಕರ್ಯದಿಂದ ವಂಚಿತವಾಗಿದ್ದು, ಮುಂದಿನ ದಿನಗಳಲ್ಲಿ ಈ ಕೊರತೆ ಸರಿಮಾಡಿಸಲಾಗುವುದು ಎಂದು ಭರವಸೆ ನೀಡಿದರು. ಶಾಲೆಗೆ ನೂತನ ಸುಸಜ್ಜಿತ ರಂಗ ಮಂಟಪ ನಿರ್ಮಿಸಿಕೊಟ್ಟ ತುಂಗಾ ಪೂಜಾರ್ತಿ ಅವರನ್ನುಈ ಸಂದರ್ಭ ಸನ್ಮಾನಿಸಲಾಯಿತು .
ತಾಲೂಕು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ರತ್ನಾಕರ ಖಾರ್ವಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ .ಜಿ .ರಾಜೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ, ಸೂರತ್ ಉದ್ಯಮಿ ಸುಭಾಷ್ ಎಂ. ಸಾಲಿನ್, ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
30/10/2021 09:55 am