ಮುಲ್ಕಿ: ಹಳೆಯಂಗಡಿ ಸಮೀಪದ ಕೆಮ್ರಾಲ್ ಗ್ರಾಪಂ ವ್ಯಾಪ್ತಿಯ ಕೆಮ್ರಾಲ್ ಮುಲ್ಲೋಟ್ಟು ಸಾರ್ವಜನಿಕ ರುದ್ರಭೂಮಿ ಬಳಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಅನುದಾನದಲ್ಲಿ ಅನುಷ್ಠಾನಗೊಂಡ ಹೈಮಾಸ್ಟ್ ದಾರಿದೀಪ ಉದ್ಘಾಟನೆ ಕೆಮ್ರಾಲ್ ಮುಲ್ಲೋಟ್ಟು ಹಿಂದೂ ರುದ್ರಭೂಮಿ ಬಳಿ ನಡೆಯಿತು.
ದಾರಿದೀಪವನ್ನು ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ.
ಕೇಂದ್ರದಲ್ಲಿರುವ ಮೋದಿ ಸರಕಾರ ಕೇವಲ ಸುಳ್ಳು ಹೇಳುವುದರಲ್ಲಿಯೇ ನಿಸ್ಸೀಮರಾಗಿದ್ದು, ಸರಕಾರದ ವಿರುದ್ಧ ಧ್ವನಿಯೆತ್ತಿದವರನ್ನು ಐಟಿ-ಬಿಟಿ ಮೂಲಕ ದಮನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಜನ ಬೆಂಬಲಿಸಿದ್ದಾರೆ ಎಂದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಕೆಮ್ರಾಲ್ ಗ್ರಾಪಂ ಸದಸ್ಯ ಮಯ್ಯದ್ದಿ ಪಕ್ಷಿಕೆರೆ, ಕಾಂಗ್ರೆಸ್ ಮುಖಂಡರಾದ ಬಾಲಾದಿತ್ಯ ಆಳ್ವ, ಕಾಂಗ್ರೆಸ್ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಸಂಯೋಜಕಿ ಶೆರಿಲ್ ಆಯೋನ, ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಹಿಂದೂ ರುದ್ರಭೂಮಿ ಅಧ್ಯಕ್ಷ ರಾಜೇಶ್ ಶೆಟ್ಟಿಗಾರ್, ಗೌರವಾಧ್ಯಕ್ಷ ವೀರಪ್ಪ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಗ್ರಾಪಂ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿ, ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬಿ.ಕೆ. ಹರಿಪ್ರಸಾದ್ ಗೌರವಿಸಿದರು. ಪ್ರಕಾಶ್ ಆಚಾರ್ಯ ನಿರೂಪಿಸಿದರು. ಬಳಿಕ ಹಳೆಯಂಗಡಿಯ ಸಸಿಹಿತ್ಲು ಶ್ರೀ ರಾಧಾಕೃಷ್ಣ ಭಜನಾ ಮಂದಿರ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಬಳಿ ಹೈಮಾಸ್ಟ್ ದೀಪ ಉದ್ಘಾಟಿಸಲಾಯಿತು.
Kshetra Samachara
06/01/2021 07:51 am