ಉಡುಪಿ: ಉಡುಪಿಯಲ್ಲಿ ಎರಡನೇ ದಿನದ ಪ್ರವಾಸದಲ್ಲಿರುವ ಸಿಎಂ ಟೆಂಪಲ್ ರನ್ ಮುಂದುವರೆಸಿದ್ದಾರೆ.ಇಂದು ಬೆಳಿಗ್ಗೆ
ಹೆಜಮಾಡಿ ಮೀನುಗಾರಿಕಾ ಬಂದರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸಿದರು.
ಈ ವೇಳೆ ಮಾತನಾಡಿದ ಸಿಎಂ,ಯಾವಾಗಲೂ ನಾವು ರಾಜಕೀಯ ಗೊಂದಲದಲ್ಲಿ ಇರುತ್ತೇವೆ. ರಾಜಕೀಯ ಮರೆತು ಧಾರ್ಮಿಕ ಪ್ರವಾಸ ಮಾಡಲು ಬಂದಿದ್ದೇನೆ.ನಿನ್ನೆ ಶ್ರೀಕೃಷ್ಣಮಠ, ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ ಇಂದು ಮಹಾಲಕ್ಷ್ಮಿ ದೇವಸ್ಥಾನ, ಗಣಪತಿ ದೇವಸ್ಥಾನಕ್ಕೆ ಭೇಟಿಯಾಗುತ್ತೇನೆ.
ಕಾಪು ಹೆಜಮಾಡಿ ಬಂದರು ಶಿಲಾನ್ಯಾಸ ಇದೆ ಮೀನುಗಾರರ ಸಮಸ್ಯೆಗಳು ಏನು ಎಂಬುದನ್ನು ತಿಳಿದುಕೊಳ್ಳುತ್ತೇನೆ.
ಪೇಜಾವರ ಶ್ರೀಗಳು, ಅಷ್ಟಮಠದ ಸ್ವಾಮೀಜಿಗಳನ್ನು ಭೇಟಿಯಾಗಿದ್ದೇನೆ ಎಂದರು.
ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದದ್ದು ಎಲ್ಲರಿಗೂ ಸಮಾಧಾನ ತಂದಿದೆ.ಸ್ವಾತಂತ್ರ್ಯ ಬಂದ ಕೂಡಲೇ ಗೋಹತ್ಯೆ ನಿಷೇಧ ಜಾರಿಗೆ ತರಬೇಕು ಎಂಬುದು ಮಹಾತ್ಮ ಗಾಂಧೀಜಿ ಕನಸಾಗಿತ್ತು.
ಬೇರೆ ಬೇರೆ ಕಾರಣಕ್ಕೆ ಮುಂದೂಡುತ್ತಾ ಬಂದರು. ಕಾಯ್ದೆಯನ್ನು ನಾವು ತಕ್ಷಣಕ್ಕೆ ಜಾರಿಗೆ ತಂದಿದ್ದೇವೆ ಎಂದು ಉಡುಪಿಯಲ್ಲಿ ಸಿಎಂ ಹೇಳಿದರು.
Kshetra Samachara
19/01/2021 10:46 am