ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾಧಿಕಾರಿ ಜಿ. ಜಗದೀಶ್ ನಾಲ್ಕೂರಿನಲ್ಲಿ 'ಗ್ರಾಮ ವಾಸ್ತವ್ಯ'; ನಾನಾ ಸಮಸ್ಯೆಗೆ ಸ್ಪಂದನೆವ್ಯ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಜಿಲ್ಲಾಧಿಕಾರಿಗಳ 'ಗ್ರಾಮ ವಾಸ್ತವ್ಯ' ನಡೆಯಿತು.

ಪ್ರತಿ ತಿಂಗಳ 3ನೇ ಶನಿವಾರ ಎಲ್ಲ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವಂತೆ ಸರಕಾರ ಸೂಚಿಸಿತ್ತು. ಅಲ್ಲದೆ, ಕಂದಾಯ ಸಚಿವರು ಉಡುಪಿ ಜಿಲ್ಲೆಯಲ್ಲಿ ಪ್ರಥಮವಾಗಿ ಈ ಕಾರ್ಯಕ್ರಮ ಪ್ರಾಯೋಗಿಕವಾಗಿ ಮಾಡಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಬೆನ್ನಲ್ಲಿ ಬ್ರಹ್ಮಾವರ ತಾಲೂಕಿನ ನಾಲ್ಕೂರಿನಲ್ಲಿ ಡಿ.ಸಿ. ಅವರು ಗ್ರಾಮ ವಾಸ್ತವ್ಯ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು 147 ಅರ್ಜಿಗಳನ್ನು ಸ್ವೀಕರಿಸಿ, ಕೆಲವು ಅರ್ಜಿಗಳ ಸಮಸ್ಯೆ ಸ್ಥಳದಲ್ಲಿಯೇ ಪರಿಹರಿಸಿದರು. ನಿಗದಿತ ಸಮಯಕ್ಕೆ ಮುಂಚಿತವಾಗಿಯೇ ಗ್ರಾಮಕ್ಕೆ ಅಗಮಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಪ್ರಥಮದಲ್ಲಿ ನಾಲ್ಕೂರು ಶಾಲೆಗೆ ಭೇಟಿ ನೀಡಿ, ಅಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸೂಕ್ತ ಸೌಲಭ್ಯ ಒದಗಿಸಿರುವ ಕುರಿತು ಪರಿಶೀಲಿಸಿದರು. ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರಲ್ಲಿ ಪರೀಕ್ಷೆ ಎದುರಿಸುವ ಕುರಿತು ಆತ್ಮ ವಿಶ್ವಾಸ ಮೂಡಿಸಿದರು. ನಂತರ ನಾಲ್ಕೂರಿನ ಸಭಾಭವನದಲ್ಲಿ ಆಯೋಜಿಸಿದ್ದ ಸಾರ್ವಜನಿಕರ ಅರ್ಜಿ ಸ್ವೀಕಾರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಪೂರ್ಣಕುಂಭ ಮತ್ತು ಚೆಂಡೆ ವಾದನದ ಮೂಲಕ ಗ್ರಾಮಸ್ಥರು ಸ್ವಾಗತಿಸಿದರು.

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ಹಿಂದಿನ ದಿನ ಒಟ್ಟು 53 ಸಾರ್ವಜನಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ವಿವಿಧ ಸಮಸ್ಯೆಗಳ ಕುರಿತು ಸ್ಥಳದಲ್ಲೇ 94 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು. ಸಾರ್ವಜನಿಕರ ಎಲ್ಲ ಅರ್ಜಿಗಳನ್ನು ವೀಕ್ಷಿಸಿ, ಅವರೆಲ್ಲರ ಅಹವಾಲು ಸಮಾಧಾನದಿಂದ ಆಲಿಸಿದ ಜಿಲ್ಲಾಧಿಕಾರಿ, ಸ್ಥಳದಲ್ಲೇ ಇತ್ಯರ್ಥಪಡಿಸಬಹುದಾದ ಅರ್ಜಿಗಳನ್ನು ಕೂಡಲೇ ಇತ್ಯರ್ಥ ಮಾಡಿದರು. ಕಾರ್ಯಕ್ರಮ ಸ್ಥಳದಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿದ್ದ ಸಾಮಾನ್ಯ ಭೋಜನವನ್ನು ಯಾವುದೇ ಆಡಂಬರಕ್ಕೆ ಅವಕಾಶವಿಲ್ಲದಂತೆ ಸಾರ್ವಜನಿಕವಾಗಿಯೇ ಸ್ವೀಕರಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಂತರ ಕಜ್ಕೆಯಲ್ಲಿನ ಕುಡುಬಿ ಜನಾಂಗದ ಸಿದ್ದನಾಯ್ಕ ಅವರ ಮನೆಗೆ ಭೇಟಿ ನೀಡಿ, ಅಲ್ಲಿ ನೆರೆದಿದ್ದ ಕುಡುಬಿ ಜನಾಂಗದವರ ವಿವಿಧ ಸಮಸ್ಯೆಗಳನ್ನು ಆಲಿಸಿ, ಅವರ ಯೋಗಕ್ಷೇಮ ಮತ್ತು ಮಕ್ಕಳ ವಿದ್ಯಾಭ್ಯಾಸ, ನಿವೇಶನದ ಅಗತ್ಯತೆ ಕುರಿತು ಮಾಹಿತಿ ಪಡೆದರು.

ಕುಡುಬಿ ಜನಾಂಗದ ಸಾಂಪ್ರದಾಯಿಕ ಕಲೆ ವೀಕ್ಷಿಸಿ, ಸ್ಥಳೀಯರು ಪ್ರೀತಿಯಿಂದ ನೀಡಿದ, ತಾವು ಬೆಳೆದ ತರಕಾರಿಯನ್ನು ಡಿ.ಸಿ. ಸ್ವೀಕರಿಸಿದರು. ನಂತರ ಮಾರಾಳಿಯ ದಲಿತ ಕಾಲೊನಿಗೆ ಭೇಟಿ ನೀಡಿ, ಅವರ ಸಮಸ್ಯೆಗಳ ಕುರಿತು ಅಹವಾಲು ಆಲಿಸಿದರು. ಬಳಿಕ ನಂಚಾರಿನ ಸ್ಮಶಾನ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಲಭ್ಯ ಕುರಿತು ಪರಿಶೀಲಿಸಿದರು.

Edited By : Nagesh Gaonkar
Kshetra Samachara

Kshetra Samachara

31/01/2021 10:00 am

Cinque Terre

8.77 K

Cinque Terre

0

ಸಂಬಂಧಿತ ಸುದ್ದಿ