ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 23ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಹೇಳಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯಲ್ಲಿ ನಾರಾಯ ಗುರುಗಳ ಚಿಂತನೆಯ ಪಾತ್ರ’ ಎಂಬ ವಿಷಯದಲ್ಲಿ ಜಿಲ್ಲಾ ಹಾಗೂ 16 ಬ್ಲಾಕ್ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
8 ನೇ ತರಗತಿಯಿಂದ ಪಿಯುಸಿ, ದ್ವಿತೀಯ ಪಿಯುಸಿಯಿಂದ ಪದವೀಧರ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಮುಕ್ತ ವಿಭಾಗ ಸೇರಿ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿದೆ ಎಂದರು. ಜಿಲ್ಲಾ ಹಾಗೂ ಪ್ರತಿ ಬ್ಲಾಕ್ ಮಟ್ಟದಲ್ಲಿಯೂ ಪ್ರತ್ಯೇಕವಾಗಿ ಪ್ರಥಮ ಹಾಗೂ ದ್ವಿತೀಯ ವಿಜೇತರಿಗೆ ನಗದು ಬಹುಮಾನದೊಂದಿಗೆ ಕಾರ್ಯಕ್ರಮದಂದು ರಾಷ್ಟ್ರ ಮಟ್ಟದ ನಾಯಕರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಸಂಬಂಧಿಸಿದ ಪುಸ್ತಕವನ್ನೂ ನೀಡಲಾಗುವುದು.ಪ್ರಬಂಧವು 500ರಿಂದ 600 ಪದಗಳಿಗೆ ಸೀಮಿತವಾಗಿರಬೇಕು ಎಂದು ಅವರು ಹೇಳಿದರು. ನಾರಾಯಣ ಗುರುಗಳ ಚಿಂತನೆಯಿಂದ ಪ್ರಭಾವಿತನಾಗಿ ತಾನು ಈ ಮಟ್ಟಕ್ಕೆ ಬೆಳೆದಿದ್ದು, ಅವರ ಜಯಂತಿ ಆಚರಣೆಯ ಮೂಲಕ ಯುವ ಪೀಳಿಗೆಗೆ ಅವರ ಆದರ್ಶಗಳನ್ನು ತಲುಪಿಸುವ ಉದ್ದೇಶದಿಂದ ವಿಜೃಂಭಣೆಯಿಂದ ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಗಿದೆ ಅಂದರು.
Kshetra Samachara
03/08/2021 05:18 pm