ಬ್ರಹ್ಮಾವರ: ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ಗ್ರಾ.ಪಂ.ಗಳಿಗೆ ಎಲ್ಲಾ ಯೋಜನೆಗಳು ಬರಲಿದ್ದು, ಅಭಿವೃದ್ದಿ ಕಾರ್ಯಗಳಿಗೆ ಪ್ರಧಾನ ಪಾತ್ರ ವಹಿಸಲಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ಕೋಟ ಗ್ರಾ.ಪಂ.ನಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ, ಮೀಟಿಂಗ್ ಹಾಲ್ ಹಾಗೂ ೧೪ನೇ ಹಣಕಾಸು ಯೋಜನೆಯಲ್ಲಿ ನಿರ್ಮಾಣಗೊಂಡ ವಿಕಲಚೇತರ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಗ್ರಾ.ಪಂ.ಗಳು ಕೆಡಿಪಿ ಸಭೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಕೆಡಿಪಿ ಸಭೆಗಳಲ್ಲಿ ಅಧಿಕಾರಿಗಳನ್ನು ಕರೆದು ಗ್ರಾಮದ ಅಭಿವೃದ್ದಿಯ ನಿಟ್ಟಿನಲ್ಲಿ ಚರ್ಚೆ ನಡೆಸಬೇಕು ಎಂದರು.
ಸಮಾರಂಭ ಅಧ್ಯಕ್ಷತೆಯನ್ನು ಕೋಟ ಗ್ರಾ.ಪಂ. ಅಧ್ಯಕ್ಷ ಅಜಿತ್ ದೇವಾಡಿಗ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಕಾರ್ಮಿಕ ಇಲಾಖೆಯ ಅಧಿಕಾರಿ ಕುಮಾರ್ ಮಾತನಾಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಜಯಂತಿ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಪಿಡಿಒ ಸುರೇಶ್ ಮರಕಾಲ ಸ್ವಾಗತಿಸಿ, ಸದಸ್ಯ ಚಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
Kshetra Samachara
16/08/2021 08:19 pm