ಕುಂದಾಪುರ: ಸೋಮವಾರ ಇಂಧನ ಸಚಿವ ಸುನಿಲ್ ಕುಮಾರ್ ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಚಿವರು ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು ಇಂದು ಬೆಳಿಗ್ಗೆ ಕೊಲ್ಲೂರು ದೇವಳಕ್ಕೂ ಭೇಟಿ ನೀಡಿದ್ದರು.
ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭ ತಾ.ಪಂ ಮಾಜಿ ಸದಸ್ಯ ಕರಣ ಪೂಜಾರಿ, ಹಟ್ಟಿಯಂಗಡಿ ಗ್ರಾ.ಪಂ ಅಧ್ಯಕ್ಷೆ ಅಮೃತಾ ಶೆಟ್ಟಿ, ಸದಸ್ಯ ಚಂದ್ರ ಮೊಗವೀರ, ಬಿಜೆಪಿ ಮುಖಂಡರಾದ ಪ್ರಭಾಕರ ಶೆಟ್ಟಿ, ಗುರುರಾಜ್ ಮೊದಲಾದವರಿದ್ದರು.
Kshetra Samachara
30/08/2021 06:02 pm