ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಬಿಜೆಪಿ, ಆರೆಸ್ಸೆಸ್ ಅಜೆಂಡಾಕ್ಕೆ ಎಸ್ ಡಿಪಿಐ ಸಾಥ್; ಯು.ಟಿ. ಖಾದರ್ ಕಿಡಿ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮೀಣ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಹಾಗೂ ಪದ್ಮಶ್ರೀ ಪುರಸ್ಕೃತ 'ಅಕ್ಷರ ಸಂತ' ಹಾಜಬ್ಬ ಸಹಿತ ಸಾಧಕರಿಗೆ ಸನ್ಮಾನ ಕಾಪು ರಾಜೀವ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸಮಾಜ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ.

ಬಿಜೆಪಿ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು. ಬಿಜೆಪಿ- ಆರೆಸ್ಸೆಸ್ ನ ಕೋಮುವಾದಿ ಉದ್ದೇಶಗಳಿಗೆ ಎಸ್ ಡಿಪಿಐ ಸಹಕಾರ ನೀಡುತ್ತಿದೆ ಎಂದರು.

ಈ ಸಂದರ್ಭ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಸಮಾಜ ಸೇವಕರಾದ ಫಾರೂಕ್ ಚಂದ್ರನಗರ, ಆಶಿಫ್ ಪಡುಬಿದ್ರಿ, ರೋಷನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಅಲ್ಪಸಂಖ್ಯಾತ ಕಾಪು ಘಟಕ ಅಧ್ಯಕ್ಷ ಶರ್ಫುದ್ದೀನ್ ಶೇಕ್, ರಾಜಶೇಖರ್ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

13/11/2021 05:19 pm

Cinque Terre

9.71 K

Cinque Terre

4

ಸಂಬಂಧಿತ ಸುದ್ದಿ