ಮುಲ್ಕಿ: ಮುಲ್ಕಿ ಸಮೀಪದ ಕೆಎಸ್ ರಾವ್ ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ನೂತನ ಗುರು ಮಂದಿರದ ಶಿಲಾನ್ಯಾಸವನ್ನು ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ರವರು ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಶ್ರೀ ನಾರಾಯಣ ಗುರುಗಳ ಆದರ್ಶಗಳು ನಮಗೆ ದಾರಿದೀಪವಾಗಿದ್ದು ಗುರು ಮಂದಿರ ನಿರ್ಮಾಣದ ಮೂಲಕ ಲೋಕ ಕಲ್ಯಾಣವಾಗಲಿ ಎಂದರು
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಬಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್ ಉಪಸ್ಥಿತರಿದ್ದರು. ಮಾಜೀ ಶಾಸಕ ಅಭಯಚಂದ್ರ ಜೈನ್ ಹಾಗೂ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈಯವರು ಆಗಮಿಸಿ ಶುಭ ಹಾರೈಸಿದರು.
Kshetra Samachara
19/12/2021 07:00 pm