ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾಳೆ ಗಾಂಧಿ ಮೈದಾನದಲ್ಲಿ"ಕಾರ್ಕಳ ಉತ್ಸವ" ಇಂದು ಸಚಿವರಿಂದ ವಿಶೇಷ ಅಂಚೆ ಚೀಟಿ ಬಿಡುಗಡೆ

ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ‘ಕಾರ್ಕಳ ಉತ್ಸವ-2022’ ಇದರ ಉದ್ಘಾಟನಾ ಸಮಾರಂಭ ನಾಳೆ ಸಂಜೆ 4:30ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಕಳ ಉತ್ಸವದ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮವು ಇವತ್ತು ಗಾಂಧೀ ಮೈದಾನದಲ್ಲಿ ನಡೆಯಿತು.

ಲೋಕಸಭಾ ಮಾಜಿ ಸ್ಪೀಕರ್ ಜಸ್ಟಿನ್ ಕೆ ಎಸ್ ಹೆಗ್ಡೆ , ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈ, ಕರ್ನಾಟಕ ಶಿಲ್ಪ ಕಲಾ ಅಕಾಡಮಿ ಪ್ರಥಮ ಅಧ್ಯಕ್ಷ ಶಿಲ್ಪಿ ಶ್ಯಾಮರಾಯ ಆಚಾರ್ಯ ರವರ ವಿಶೇಷ ಅಂಚೆ ಲಕೋಟೆ ಯನ್ನು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು.

Edited By : Nagaraj Tulugeri
Kshetra Samachara

Kshetra Samachara

09/03/2022 09:53 pm

Cinque Terre

6.72 K

Cinque Terre

0

ಸಂಬಂಧಿತ ಸುದ್ದಿ