ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಮನ್ ವೆಲ್ತ್ ಪದಕ ವಿಜೇತ ಗುರುರಾಜ್ ಪೂಜಾರಿಗೆ ಉಸ್ತುವಾರಿ ಸಚಿವರಿಂದ ಸನ್ಮಾನ

ಉಡುಪಿ: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ರಾಜ್ಯದ ಏಕೈಕ ಕಂಚಿನ ಪದಕ ವಿಜೇತ ವೇಯ್ಟ್ ಲಿಫ್ಟರ್ ಗುರುರಾಜ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಸಂದರ್ಭ ಉಸ್ತುವಾರಿ ಸಚಿವ ಎಸ್ ಅಂಗಾರ ಸನ್ಮಾನಿಸಿ ಗೌರವಿಸಿದರು.ಇದೇ ವೇಳೆ ಅಂಗವಿಕಲ ಕಲ್ಯಾಣ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ, 2020-21ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ 10 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ನಡೆಯಿತು.

ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಲಿಮಿಟೆಡ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಕಲ್ಮಾಡಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

15/08/2022 02:37 pm

Cinque Terre

4.4 K

Cinque Terre

0

ಸಂಬಂಧಿತ ಸುದ್ದಿ