ಕುಂದಾಪುರ: ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿಯಲ್ಲಿ ಇಂದು ಬೆಳಿಗ್ಗೆ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಒಳ ಪ್ರವೇಶಿಸಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ ಮಂಡಳಿ ಮತ್ತು ಶಿಕ್ಷಕರ ನೇತೃತ್ವದಲ್ಲಿ ಪೋಷಕರ ಸಭೆ ಕರೆದು ಮನವೊಲಿಕೆ ಮಾಡಿ ತದನಂತರ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಯಾವುದೇ ರೀತಿಯ ಪ್ರತಿಭಟನೆಗೂ ಆಡಳಿತ ಮಂಡಳಿ ಹಾಗೂ ಗಂಗೊಳ್ಳಿ ಪೊಲೀಸ್ ಸಿಬ್ಬಂದಿಗಳು ಆಸ್ಪದ ಮಾಡಿಕೊಡಲಿಲ್ಲ.ಸದ್ಯ ಗಂಗೊಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಆಯಾ ಕಾಲೇಜಿನ ಆಡಳಿತ ಮಂಡಳಿಗಳು ರಜೆ ಘೋಷಿಸಿದೆ.
ಘಟನೆಯ ಸ್ಥಳದಲ್ಲಿ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ, ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಕುಂದಾಪುರ ಹಾಗೂ ಬೈಂದೂರು ತಾಲೂಕಿನಾದ್ಯಂತ ವಿವಾದಿತ ಕಾಲೇಜಿನ ಆಸುಪಾಸಿನಲ್ಲಿ ಪೊಲೀಸ್ ಪಹರೆ ನಿಯೋಜನೆ ಮಾಡಿ ಯಾವುದೇ ತರಹದ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಹೌದು ಇದೇ ರೀತಿ ಎರಡು ಮೂರು ದಿನಗಳಿಂದ ಹಿಜಾಬ್-ಕೇಸರಿ ವಿವಾದ ಬೂದಿ ಮುಚ್ಚಿದ ಕೆಂಡದಂತಿದ್ದ ಹಿನ್ನೆಲೆಯಲ್ಲಿ ಇಂದೂ ಸಹ ನಾವುಂದ ಕಾಲೇಜಿನಲ್ಲಿ ರಜೆ ಘೋಷಿಸಲಾಗಿದೆ.
Kshetra Samachara
05/02/2022 03:29 pm