ಮಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರನ್ನು ಈ ಕುರಿತು ಭೇಟಿಯಾಗಿ ಮಾತುಕತೆ ನಡೆಸಿದ ಸಚಿವ ಕೋಟ, ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದರು. ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ವಿನಂತಿ ಮಾಡಿದ್ದಾರೆ.
PublicNext
20/05/2022 11:01 am