ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಲ್ಲಿ ಮತ್ತೆ ತಲೆ ಎತ್ತಿದ ಹಿಜಾಬ್

ಮಂಗಳೂರು: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಾರ್ ಮುಂದುವರೆದಿದೆ. ಇಂದು ಸಹ ಮಂಗಳೂರು ವಿವಿ ಕಾಲೇಜಿಗೆ ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಆಗಮಿಸಿದ್ದಾರೆ.

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಭಾರ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ್ದಾರೆ. ನಿನ್ನೆ ಶಾಸಕ ವೇದವ್ಯಾಸ್ ಕಾಮತ್‌, ಮಂಗಳೂರು ವಿವಿ ಕುಲಪತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಲೇಜು ತರಗತಿ ಮತ್ತು ಆವರಣದಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು.

Edited By : Somashekar
Kshetra Samachara

Kshetra Samachara

28/05/2022 04:56 pm

Cinque Terre

10.13 K

Cinque Terre

5

ಸಂಬಂಧಿತ ಸುದ್ದಿ