ಕುಂದಾಪುರ: ಬೈಂದೂರು, ಕುಂದಾಪುರದಲ್ಲಿ ಖಾಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗಳನ್ನು ಇಂದು ಸಂಜೆಯೊಳಗಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಖಾಲಿ ಇರುವ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಲ್ಲಿ ಸೇವಾ ಹಿರಿತನದ ಮಾನದಂಡ ಪರಿಗಣಿಸಲಾಗುವುದು. ಈ ಎಲ್ಲ ಹುದ್ದೆಗಳಿಗೆ ಸಂಜೆಯೊಳಗಾಗಿ ಕೌನ್ಸೆಲಿಂಗ್ ನಡೆಯಲಿದೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಬೈಂದೂರು ಹಾಗೂ ಕುಂದಾಪುರ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯೇ ಇಲ್ಲದೇ ಶಿಕ್ಷಣ ಇಲಾಖೆ ಸೊರಗಿದಂತಾಗಿದೆ.
PublicNext
23/08/2022 10:22 am