ಕುಂದಾಪುರ: 2018ರಲ್ಲಿ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ನೀಡಿದ ಆದೇಶವನ್ನು ಸ್ವತಃ ಶಿಕ್ಷಣ ಇಲಾಖೆಯೇ ಕಸದ ಬುಟ್ಟಿಗೆ ಹಾಕಿದ ಘಟನೆಯನ್ನು ವರದಿ ಮಾಡಿದ ವಿಶೇಷ ವರದಿಗೆ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ವಿದಾನ ಪರಿಷತ್ ಸದಸ್ಯ ಬೋಜೇಗೌಡ ಪ್ರತಿಕ್ರಿಯಿಸಿದ್ದಾರೆ.
ಪಬ್ಲಿಕ್ ನೆಕ್ಸ್ಟ್ ವಿಶೇಷ ವರದಿ ವೀಕ್ಷಿಸಿದ ಎಂ.ಎಲ್.ಸಿ ಬೋಜೇಗೌಡ ಪಬ್ಲಿಕ್ ನೆಕ್ಸ್ಟ್ ಜೊತೆ ದೂರವಾಣಿಯಲ್ಲಿ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಕಡೆಗಣಿಸಲಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಮಣಿದಿರುವುದೇ ಕಾರಣ ಎಂದು ಆರೋಪಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಶಾಲೆ ಕಾಲೇಜುಗಳ ಅಭಿವೃದ್ಧಿಯನ್ನು ಕಡೆಗಣಿಸಲಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಈ ಬಗ್ಗೆ ವಿದಾನಪರಿಷತ್ ಕಲಾಪದಲ್ಲಿ ಪ್ರಶ್ನಿಸಲಾಗುವುದು ಎಂದಿದ್ದಾರೆ. ಆದರೆ ಇದುವರೆಗೆ ತನ್ನ ಆದೇಶವನ್ನೇ ಕಸದ ಬುಟ್ಟಿಗೆ ಹಾಕಿಕೊಂಡು ಕುಳಿತಿರುವ ಶಿಕ್ಷಣ ಇಲಾಖೆ ಮಾತ್ರ ತುಟಿಬಿಚ್ಚಿಲ್ಲ.
ಜಯಶೇಖರ್ ಮಡಪ್ಪಾಡಿ, ಪಬ್ಲಿಕ್‌ನೆಕ್ಸ್ಟ್ ಕುಂದಾಪುರ
PublicNext
10/09/2022 12:15 pm