ಉಡುಪಿ: ಇತ್ತೀಚೆಗೆ ಕರಾವಳಿಯಲ್ಲಿ ಹುಟ್ಟಿಕೊಂಡ ಹಿಜಾಬ್ ಪ್ರಕರಣವು ತೀವ್ರಸ್ವರೂಪದ ವಿವಾದವಾಗಿ ಮಾರ್ಪಟ್ಟು ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದೆ. ಪರೀಕ್ಷೆಗಳಿಗೆ ದಿನ ಎಣಿಸುತ್ತಿರುವ ಸಂದರ್ಭದಲ್ಲಿ ಇಂತಹ ವಿವಾದಗಳು ವಿದ್ಯಾಭ್ಯಾಸಕ್ಕೆ ಕಂಟಕವಾಗಿದ್ದು, ಪ್ರಜಾಸತ್ತಾತ್ಮಕ ದಾರಿಯಲ್ಲಿ ಇದಕ್ಕೆ ಕೊನೆ ಹಾಡಬೇಕಾಗಿದೆ. ಈ ನಡುವೆ ಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಕೂಡ ಅಪಾರ್ಥಕ್ಕೊಳಪಡಿಸಿ ಶಿರವಸ್ತ್ರ ಧರಿಸಿದ ವಿದ್ಯಾರ್ಥಿನಿಯರಿಗೆ ಶಿಕ್ಷಣವನ್ನು ನಿರಾಕರಿಸುವ ಪ್ರವೃತ್ತಿ ಕೆಲವು ಸಂಸ್ಥೆಗಳಲ್ಲಿ ಕಂಡುಬಂದಿದ್ದು ಇದು ಅತ್ಯಂತ ಖಂಡನಾರ್ಹ.
ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನ ಮಾಡುವುದರ ವಿರುದ್ಧ ನಾಳೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್ ಎಸ್ ಎಫ್) ಹೇಳಿದೆ.
Kshetra Samachara
22/02/2022 09:36 pm