ಮಂಗಳೂರು: ಹಿಜಾಬ್ ಹೈಕೋರ್ಟ್ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ಮಂಗಳೂರು ವಿವಿ ಸಮನ್ವಯ ಸಮಿತಿ ಹೆಸರಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾಗಿದೆ.
ಮಂಗಳೂರಿನ ಕ್ಲಾಕ್ ಟವರ್ ಸರ್ಕಲ್ ಬಳಿ ಪ್ರತಿಭಟನೆ ದಿಢೀರ್ ಎಂದು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಜಮಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ಪೊಲೀಸ್ ಅನುಮತಿ ಪಡೆದು ಕ್ಲಾಕ್ ಟವರ್ ಬಳಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು ರಸ್ತೆಗೆ ಅಡ್ಡ ನಿಂತು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ತಡೆದ ಪೊಲೀಸರು ವಿದ್ಯಾರ್ಥಿಗಳನ್ನು ಹಿಂದೆ ಕಳಿಸಿದ್ದಾರೆ.
ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರ ಮಧ್ಯೆ ವಾಗ್ವಾದ ನಡೆದಿದೆ. ರಸ್ತೆ ಮಧ್ಯೆ ಪ್ರತಿಭಟನೆಗೆ ಅವಕಾಶ ಕೊಡುವಂತೆ ವಾಗ್ವಾದ ನಡೆಯಿತು. ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರ ವಿರುದ್ಧ ವಿದ್ಯಾರ್ಥಿನಿಯರು ಧಿಕ್ಕಾರ ಕೂಗಿ ರಸ್ತೆಯಲ್ಲೇ ಕುಳಿತಿದ್ದಾರೆ. ಬಳಿಕ ರಸ್ತೆಯ ಬದಿಯಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಯಿತು.
PublicNext
25/03/2022 06:42 pm