ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವರ್ಷಪೂರ್ತಿ ಕೌಶಲ್ಯ ತರಬೇತಿ"

ಮಂಗಳೂರು: ವಿದೇಶಿ ವಸ್ತುಗಳ ಬದಲು ಸ್ವಾವಲಂಬಿ ಉತ್ಪಾದನೆಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಒತ್ತು ನೀಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 224 ತಾಲೂಕುಗಳಿದ್ದು, ಪ್ರತಿ ತಾಲೂಕಿನಲ್ಲಿ ತಲಾ 50ರಂತೆ ವರ್ಷಪೂರ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲ ರೀತಿಯ ಗ್ರಾಮೀಣ ಉತ್ಪಾದನೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ತಿಳಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ರವಿವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸೇವಾ ವಲಯ, ಸಾರಿಗೆ ವಲಯ, ಕೈಗಾರಿಕೆ ವಲಯಗಳಲ್ಲಿ ಕೈಗೊಳ್ಳುವ ಉದ್ದೇಶಗಳಿಗೆ ರಾಜ್ಯ ಸರಕಾರ ಸಾಲ ಸೌಲಭ್ಯ ವಿತರಿಸುತ್ತಿದ್ದು, ಕೌಶಲ್ಯ ಕರ್ನಾಟಕ ಯೋಜನೆಗೆ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಈ ನಿಗಮದಡಿಯಲ್ಲಿ 206 ಜಾತಿಗಳು ಬರುತ್ತಿದ್ದು, ಯಾವುದೆಲ್ಲ ವೃತ್ತಿಗಳನ್ನು ಪುನರುಜ್ಜೀವನಗೊಳಿಸಬೇಕು ಎಂಬ ಬಗ್ಗೆ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಈ ಮೂಲಕ‌ ತರಬೇತಿ ಪೂರ್ಣಗೊಳಿಸಿದವರಿಗೆ ಮಾತ್ರ ಸುಮಾರು ಐದು ಲಕ್ಷ ರೂ.ವರೆಗೆ ಸಾಲ ಸೌಲಭ್ಯ ನೀಡಲು ಅವಕಾಶ ಇದೆ.

ವಿದೇಶಿ ಉತ್ಪನ್ನ ಬದಲು ದೇಶೀಯವಾಗಿ ಮರೆಯಾಗುತ್ತಿರುವ ಹಾಗೂ ಸಾಂಪ್ರದಾಯಿಕ ಉತ್ಪನ್ನ, ಕಸುಬುಗಳನ್ನು ಮತ್ತೆ ಮುಖ್ಯವಾಹಿನಿಗೆ ತರಲು ಉದ್ದೇಶಿಸಲಾಗಿದೆ. ಪ್ರಧಾನಿಯವರ ಕಲ್ಪನೆಯೂ ಗ್ರಾಮ ಭಾರತವಾಗಿದ್ದು, ಎಲ್ಲ ಸಮುದಾಯಕ್ಕೂ ಆದ್ಯತೆ ನೀಡಲಾಗುವುದು. ಕೃಷಿ, ಅರಣ್ಯ, ಸಮುದ್ರ ಉತ್ಪನ್ನ ಕೈಗಾರಿಕೆಗಳಿಗೆ ಆರ್ಥಿಕ ನೆರವು ಸಿಗಲಿದೆ ಎಂದು ಆರ್.ರಘು ಕೌಟಿಲ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಜಯಕುಮಾರ್, ರೂಪಾ ಡಿ.ಬಂಗೇರ, ಸುರೇಂದ್ರ, ಮಹೇಶ್‌ಕುಮಾರ್, ಕಿರಣ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

24/01/2021 08:53 pm

Cinque Terre

17.53 K

Cinque Terre

0

ಸಂಬಂಧಿತ ಸುದ್ದಿ