ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕೆ.ಎಸ್ ರಾವ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 10.60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕೊಠಡಿಯ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಮುಲ್ಕಿ- ಮೂಡಬಿದರಿ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದರು.
ಅಧ್ಯಕ್ಷತೆಯನ್ನು ಮುಲ್ಕಿ ನ.ಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ಸತೀಶ್ ಅಂಚನ್, ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್, ಸದಸ್ಯರಾದ ವಿಮಲಾ ಪೂಜಾರಿ, ಪುತ್ತುಬಾವ, ಮಂಜುನಾಥ ಕಂಬಾರ ಉಪಸ್ಥಿತರಿದ್ದರು.
Kshetra Samachara
26/09/2021 01:11 pm