ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ನ ಡಾll ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ , ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಗ್ರಂಥಾಲಯ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸುವ ಶಾಲಾ ಮಕ್ಕಳ (ಸಿಎಸ್ ಬಿಆರ್) ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೌನ್ಸಿಲ್ ಆವಿಷ್ಕಾರ ಪ್ರಶಸ್ತಿ 2021 ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಅಲ್ಪಾಡಿ-ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿಯರಾದ ಅನುಷಾ ಮತ್ತು ರಕ್ಷಿತಾ ನಾಯ್ಕ್ ಇವರನ್ನು ಅಭಿನಂದಿಸಲಾಯಿತು.
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಸಚಿವರ ಆಪ್ತ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.
Kshetra Samachara
08/10/2021 08:31 pm