ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: "ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಮೂಡಿಸಲು ಸಂಘಪರಿವಾರ ಸಂಚು"

ಪುತ್ತೂರು: ಸಂಘಪರಿವಾರ ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮು ಗಲಭೆ ಸೃಷ್ಟಿಸುವ ಸಂಚು ರೂಪಿಸುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ( ಸಿಎಫ್ಐ) ಆರೋಪಿಸಿದೆ.

ಪುತ್ತೂರಿನ ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ಕಳೆದ ವಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಈ ಹಲ್ಲೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ತ್ರಿಶೂಲ ದಾಳಿ, ಬೆದರಿಕೆಗೆ ಹಿಂದೂ ಸಂಘಟನೆಗಳ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಲ ನೇರ ಹೊಣೆ ಎಂದು ಆರೋಪಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ, ಈ ಘಟನೆ ಪುನರಾವರ್ತಿಸಿದರೆ ಎಲ್ಲ ವಿದ್ಯಾರ್ಥಿ ಸಂಘಟನೆಗಳು ಸೇರಿ 'ಪುತ್ತೂರು ಚಲೋ' ನಡೆಸಲಿದ್ದಾರೆ ಎಂದರು.

Edited By : Manjunath H D
Kshetra Samachara

Kshetra Samachara

25/11/2021 02:01 pm

Cinque Terre

9.31 K

Cinque Terre

3

ಸಂಬಂಧಿತ ಸುದ್ದಿ