ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ಪುಸ್ತಕಗಳು ಜ್ಞಾನದ ವೃದ್ಧಿಗೆ ಸಹಕಾರಿ: ಉಮಾನಾಥ ಕೋಟ್ಯಾನ್

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ನೂತನ ಡಿಜಿಟಲ್‌ ಗ್ರಂಥಾಲಯವನ್ನು ಮುಲ್ಕಿ- ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ ಪುಸ್ತಕಗಳು ಜ್ಞಾನದ ವೃದ್ಧಿಗೆ ಸಹಕಾರಿಯಾಗಿದ್ದು ಗ್ರಂಥಾಲಯಗಳನ್ನು ಸ್ವಚ್ಛವಾಗಿ ಇಡುವುದರ ಜೊತೆಗೆ ಸರಕಾರದ ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಂಡು ಪಂಚಾಯತ್ ಅಭಿವೃದ್ಧಿ ಕಾರ್ಯದಲ್ಲಿ ಗ್ರಾಮಸ್ಥರು ಸಹಕರಿಸಬೇಕು ಎಂದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ನ ಸ್ವಂತ ನಿಧಿ ಶೇ 25 ಪ.ಜಾತಿ/ ಪ.ಪಂಗಡದ ಕಲ್ಯಾಣ ಕಾರ್ಯಕ್ರಮದಡಿ ಮನೆ ರಿಪೇರಿ, ವಿದ್ಯಾರ್ಥಿ ವೇತನ, ಮದುವೆ ವೆಚ್ಚ, ವೈದ್ಯಕೀಯ ವೆಚ್ಚಕ್ಕೆ ಸಹಾಯ ಧನ ಹಾಗೂ ಶೇ 3ರ ಅಂಗವಿಕಲರ ಕಲ್ಯಾಣ ಕಾರ್ಯಕ್ರಮದಡಿ ಸಹಾಯ ಧನವನ್ನು ಶಾಸಕರು ವಿತರಿಸಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತಿಕಾರಿಬೆಟ್ಟು ಗ್ರಾ ಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ವಹಿಸಿದ್ದರು

ಉಪಾಧ್ಯಕ್ಷೆ ಶಶಿಕಲಾ, ಗ್ರಾಮ ಪಂಚಾಯತ್ ಸದಸ್ಯರು, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಉದಯ ಅಮೀನ್ ಮಟ್ಟು, ಸಾಧು ಅಂಚನ್, ಗಿರಿಧರ ಕಾಮತ್ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಲೆಕ್ಕ ಸಹಾಯಕ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

01/01/2022 09:56 pm

Cinque Terre

15.55 K

Cinque Terre

0

ಸಂಬಂಧಿತ ಸುದ್ದಿ