ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಕಲ್ಲಡ್ಕ ಪ್ರಭಾಕರ್ ಭಟ್ ಗೋ ಬ್ಯಾಕ್ : ಸಿ.ಎಫ್.ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ ಇಂದು ಕೊಣಾಜೆಯ ಮಂಗಳ ಗಂಗೋತ್ರಿ ಕ್ಯಾಂಪಸ್ ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಗೆ ಆರೆಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಆಹ್ವಾನ ನೀಡಿರುವುದಕ್ಕೆ ಕ್ಯಾಂಪಸ್ ಫ್ರಂಟ್ ಮಂಗಳೂರು ವಿವಿ ಘಟಕ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ಬೆಳಗ್ಗೆ ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದೆ.

ಕೊಣಾಜೆ ವಿವಿ ಬಳಿ ಪ್ರತಿಭಟನೆ ನಡೆಸಿದ ಸಿಎಫ್ ಐ ಕಾರ್ಯಕರ್ತರು ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿದಾಗ ಪೊಲೀಸರು ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ನಾಯಕ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡರು.

ಮಂಗಳೂರು ವಿವಿ ಕ್ಯಾಂಪಸ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿದೆ.

Edited By : Shivu K
PublicNext

PublicNext

30/03/2022 12:52 pm

Cinque Terre

37.92 K

Cinque Terre

10

ಸಂಬಂಧಿತ ಸುದ್ದಿ