ಕುಂದಾಪುರ: ಬೆಂಗಳೂರಿನ ಕ್ರಿಶ್ಚಿಯನ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಇದು ಖಂಡನೀಯ ಎಂದು ಹೇಳಿದ್ದಾರೆ.
ಶಾಲೆಯಲ್ಲಿ ಬೈಬಲ್ ಕಡ್ಡಾಯ ಮಾಡಿರುವುದು ಖಂಡನೀಯ. ಪ್ರವೇಶಾತಿ ವೇಳೆಯಲ್ಲೇ ಬೈಬಲ್ ಕಡ್ಡಾಯ ಎಂದು ಹೇಳಿದ್ದಾರೆ. ಇದು ಕಾನೂನು ಬಾಹಿರ ಕೃತ್ಯ. ಮಕ್ಕಳಿಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ತಕ್ಷಣ ಈ ಶಾಲೆಯನ್ನು ರದ್ದುಮಾಡಿ ಎಂದಿರುವ ಅವರು, ಈ ಶಾಲೆಯ ಮಾನ್ಯತೆ ರದ್ದು ಮಾಡಿ ಸೀಸ್ ಮಾಡಿ ಎಂದು ಶಿಕ್ಷಣ ಸಚಿವರಲ್ಲಿ ಮುತಾಲಿಕ್ ಆಗ್ರಹಿಸಿದ್ದಾರೆ.
PublicNext
25/04/2022 01:14 pm