ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ: ವಿದ್ಯಾರ್ಥಿನಿ ಮನೆಗೆ ಪುತ್ತೂರು ಶಾಸಕ ಭೇಟಿ

ವಿಟ್ಲ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು ಧನ್ಯಶ್ರೀ ಸಾಧನೆ ಬಂಟ್ವಾಳ ಮತ್ತು ಪುತ್ತೂರು ತಾಲೂಕಿಗೆ ಹೆಮ್ಮೆ ತರುವ ವಿಚಾರವಾಗಿದೆ. ಅವಳ ಸಾಧನೆಯ ಹಿಂದೆ ಹೆತ್ತವರ ಮತ್ತು ಅಧ್ಯಾಪಕರ ಶ್ರಮವಿದೆ ಎಂದರು. ಈ ಸಂದರ್ಭ ಪ್ರಮುಖರಾದ ಅರುಣ್ ಎಂ ವಿಟ್ಲ, ಹರಿಪ್ರಸಾದ್ ಯಾದವ್, ಮೋಹನದಾಸ ಉಕ್ಕುಡ ಮೊದಲಾದವರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

19/05/2022 06:58 pm

Cinque Terre

13.24 K

Cinque Terre

0

ಸಂಬಂಧಿತ ಸುದ್ದಿ