ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಠ್ಯ ಪುಸ್ತಕ ವಿವಾದ: ದೇವೇಗೌಡರ ಸಲಹೆ ಬಗ್ಗೆಯೂ ಚರ್ಚೆ: ಸಚಿವ ಕೋಟ

ಉಡುಪಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯರಾದ ದೇವೇಗೌಡರ ಸಲಹೆಯನ್ನು ಗೌರವಿಸಿ ಅವರಿಗೆ ಮನದಟ್ಟು ಮಾಡುವ ಕೆಲಸವನ್ನು ಮಾಡುತ್ತೇವೆ.ಇವತ್ತಿನ ಸಭೆಯಲ್ಲಿ ಆ ಬಗ್ಗೆ ತೀರ್ಮಾನ ಆಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವರು,ಹಿರಿಯರಾದ ದೇವೇಗೌಡರ ಸಲಹೆಯೂ ಸೇರಿಸಿದಂತೆ ಇವತ್ತು ಎಲ್ಲ ವಿಷಯವೂ ಮುಖ್ಯಮಂತ್ರಿಗಳ ಸಭೆಯಲ್ಲಿ ಚರ್ಚೆಯಾಗಲಿದೆ.

ಸಭೆಯ ಬಳಿಕ ದೇವೇಗೌಡರಿಗೆ ಮನವರಿಕೆ ಮಾಡಿಕೊಡಲಾಗುವುದು. ಈಗಾಗಲೇ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರ ಮನೆಗೆ ತೆರಳಿ ಶಿಕ್ಷಣ ಸಚಿವರು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. ಅದೇ ಅದೇ ರೀತಿ ಯಾರೆಲ್ಲಾ ಆಕ್ಷೇಪ ವ್ಯಕ್ತಪಡಿಸಿದ್ದಾರೋ ಅವರಿಗೆ ಮನದಟ್ಟು ಮಾಡಿ ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

Edited By : Manjunath H D
PublicNext

PublicNext

22/06/2022 02:55 pm

Cinque Terre

34.96 K

Cinque Terre

2

ಸಂಬಂಧಿತ ಸುದ್ದಿ