ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ'

ಮಂಗಳೂರು: ಪಠ್ಯಪುಸ್ತಕದ ಬಗ್ಗೆ ಸುಳ್ಳು ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನೀಲ್‌ ಕುಮಾರ್‌ ದಕ್ಷಿಣ ಕನ್ನಡ ಜಿಲ್ಲೆಯವರ ಬಳಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಯುವ ನಾಯಕ ಮಿಥುನ್ ರೈ ಆಗ್ರಹಿಸಿದ್ದಾರೆ.

ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯ ತೆಗೆದ ವಿಚಾರಕ್ಕೆ ಸಂಬಂಧಪಟ್ಟಂತೆ ವಿವಾದವೆದ್ದಾಗ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್‌ ಕುಮಾರ್ ಪಠ್ಯವನ್ನು ತೆಗೆದಿಲ್ಲ. ಕಾಂಗ್ರೆಸ್‌ನವರು ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು. ಇದೀಗ ಶಿಕ್ಷಣ ಸಚಿವರು ಸಮಾಜ ವಿಜ್ಞಾನದ ನಾರಾಯಣ ಗುರು ಪಠ್ಯದಲ್ಲಿ ಸೇರಿಸುವಂತೆ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಸಚಿವ ಕೋಟಾ, ಸುನೀಲ್‌ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ಜನರ ಭಾವನೆ ಜೊತೆಗೆ ಚೆಲ್ಲಾಟವಾಡಿದ್ದಾರೆ. ಆದ್ದರಿಂದ ಅವರು ಜಿಲ್ಲೆಯ ಜನತೆಯ ಕ್ಷಮೆ ಕೇಳಬೇಕು ಎಂದರು.

ಅಂದು ನಾವು ಮಾಡಿದ ಹೋರಾಟದ ಪ್ರತಿಫಲದಿಂದ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಹ್ಮರ್ಷಿ ನಾರಾಯಣಗುರು ಪಾಠ ಸೇರಿದೆ. ಇನ್ನೂ ಕೂಡ ಪಠ್ಯಪುಸ್ತಕದಲ್ಲಿ ಹಲವಾರು ತಪ್ಪುಗಳಿವೆ. ಆ ತಪ್ಪುಗಳನ್ನು ಸದ್ಯದಲ್ಲೇ ಬಯಲು ಮಾಡುತ್ತೇವೆ. ನಿನ್ನೆ ಮಳೆ ಹಾನಿ ಪರಿಶೀಲಿಸಲು ಜಿಲ್ಲೆಗೆ ಭೇಟಿ ನೀಡಿದ ಸಿಎಂ ಮುಲ್ಕಿ-ಮೂಡಬಿದ್ರೆ ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಇದೇ ವೇಳೆ ಆರೋಪಿಸಿದರು.

Edited By : Manjunath H D
PublicNext

PublicNext

13/07/2022 06:06 pm

Cinque Terre

39.16 K

Cinque Terre

1

ಸಂಬಂಧಿತ ಸುದ್ದಿ