ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಸಾಧಕ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆ; ರಮಾನಾಥ ರೈ

ಬಂಟ್ವಾಳ: ಕೆಲವು ವರ್ಷಗಳ ಹಿಂದೆ ಅನಕ್ಷರತೆ ತುಂಬಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದು ನಗರ ಭಾಗದ ವಿದ್ಯಾರ್ಥಿಗಳನ್ನು ಮೀರಿಸಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆ ಮೂಲಕ ಗ್ರಾಮೀಣ ಭಾಗ ಜ್ಞಾನಿಗಳ ಊರಾಗಿ ಮಾರ್ಪಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಇದರ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಿ.ಸಿ.ರೋಡಿನಲ್ಲಿ ಹಮ್ಮಿಕೊಂಡ 'ನಮ್ಮೂರ ಹೆಮ್ಮೆ' ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆಯಾಗಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಅದರಿಂದ ಎನ್.ಎಸ್.ಯು.ಐ.ನಿಂದ ಗೌರವಿಸಲಾಗುತ್ತಿದೆ. ಇಂದಿನ ಸಾಧಕ ಸಾಧಕಿಯರು ಮುಂದೆ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಮೂಲಕ ನಿಮ್ಮ ಹೆತ್ತವರ ಋಣ ತೀರಿಸಬೇಕು ಎಂದರು.

ಶಿಕ್ಷಣ ಕೊಡದ ತಂದೆ ತಾಯಿ ಮಕ್ಕಳ ಮೊದಲ ವೈರಿ. ಇಂದಿನ ಕಾಲದಲ್ಲಿ ಎಷ್ಟೇ ಕಷ್ಟ ಇದ್ದರೂ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಶಾಲೆಗೆ ಕಳುಹಿಸುತ್ತಾರೆ. ಹೆಚ್ಚಿನ ಅಂಕ ಗಳಿಸಲು ಹೆತ್ತವರು, ಅಧ್ಯಾಪಕರು ಸಹಕಾರ, ಪರಿಶ್ರಮ ಪಡುತ್ತಿದ್ದಾರೆ. ಅಂತಹ ಪೋಷಕರು, ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳು ಹೆಮ್ಮೆ ಪಡಬೇಕು ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

21/08/2022 02:53 pm

Cinque Terre

11.09 K

Cinque Terre

0

ಸಂಬಂಧಿತ ಸುದ್ದಿ