ಕಾರ್ಕಳ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಅವರ ವ್ಯಕ್ತಿತ್ವ ವಿಕಸನ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದು ಕಾರ್ಕಳ ಶಾಸಕ ಹಾಗೂ ಇಂಧನ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.ಸೋಮವಾರ ಕಾರ್ಕಳ ಎಸ್ ವಿ ಟಿ ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು ಅದರ ಜತೆಗೆ ಭವಿಷ್ಯದ ಪ್ರಜ್ಞಾವಂತ ನಾಗರೀಕರನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿಯು ಕೂಡ ಅವರ ಮೇಲಿದೆ ಎಂದರು.
ಮುಂದಿನ 50 ವರ್ಷಗಳಲ್ಲಿ ಭಾರತದ ಭವಿಷ್ಯವನ್ನು ರೂಪಿಸುವ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ನೆರವಾಗಬಲ್ಲ ವಿದ್ಯಾರ್ಥಿ ಸಮೂಹ ಸಿದ್ಧವಾಗಬೇಕಿದೆ ಎಂದರು. ಕಾಲಕ್ಕೆ ತಕ್ಕಂತೆ ಶಿಕ್ಷಣದ ಸ್ವರೂಪ ಬದಲಾಗುತ್ತಿದ್ದು ಶಿಕ್ಷಣದ ಜೊತೆಗೆ ನವ ಭಾರತ ನಿರ್ಮಾಣದ ಕನಸಿನೊಂದಿಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಸ್ ವಿ ಟಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆಪಿ ಶೆಣೈ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರು ದತ್ತ ಎಂ,ಎನ್, ಸೇರಿದಂತೆ ಮುಂತಾದವರಿದ್ದರು.
Kshetra Samachara
05/09/2022 07:51 pm