ಮುಲ್ಕಿ: ಕೃಷಿ ಪ್ರಧಾನ ದೇಶ ಭಾರತದಲ್ಲಿ ಅಕ್ರಮವಾಗಿ ಗೋ ಕಳ್ಳತನ ಮಾಡಿ ಗೋ ಹತ್ಯೆ ಮಾಡುವುದನ್ನು ಖಂಡಿಸುತ್ತೇನೆ ಎಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಅವರು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ, ರಾಜ್ಯದಲ್ಲಿ ಗೋ ಹತ್ಯೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧದ ಮಸೂದೆಯನ್ನು ಮಂಡನೆ ಮಾಡಿ ಜಾರಿಗೆ ತರಲು ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
Kshetra Samachara
21/11/2020 12:26 pm