ಕಾಪು : ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಬಿಡುಗಡೆಗೊಂಡ 85 ಸಾವಿರ ರೂಪಾಯಿ ಮೌಲ್ಯದ ಮೂರು ತ್ರಿಚಕ್ರ ವಾಹನವನ್ನು ಶಾಸಕ ಲಾಲಾಜಿ ಮೆಂಡನ್ ಮೂರು ಜನ ವಿಕಲಚೇತನರಿಗೆ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಅವರು ಸರಕಾರದ ವಿವಿಧ ಯೋಜನೆಗಳ ಮೂಲಕ ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಅನಾರೋಗ್ಯ ಪೀಡಿತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಡಿಯೂ ಕೋಟ್ಯಾಂತರ ರೂಪಾಯಿ ಸಹಾಯಧನ ಒದಗಿಸಿಕೊಡಲಾಗಿದೆ. ಅಂಗವಿಕಲರು, ಬಡ ವರ್ಗದವರು ಮತ್ತು ದೀನ ದಲಿತರ ಕಲ್ಯಾಣಕ್ಕಾಗಿ ಸರಕಾರದಿಂದ ಸಿಗುವ ಸೌಲಭ್ಯಗಳನ್ನೂ ಕಾಪು ಕ್ಷೇತ್ರದ ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಿ ಕೊಡಲಾಗುತ್ತಿದೆ ಎಂದರು.
ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಪ್ರಮುಖರಾದ ಪ್ರವೀಣ್ ಪೂಜಾರಿ, ನಿತಿನ್ ಶೇರಿಗಾರ್, ಮಹಮದ್ ಅಲಿ, ಚಂದ್ರ ಮಲ್ಲಾರು, ಸುದರ್ಶನ್ ಕುರ್ಕಾಲು, ಸುಮ ಶೆಟ್ಟಿ, ರತ್ನಾಕರ ಕೋಟೆ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
31/05/2022 07:39 pm