ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಇಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
'ಜಿಲ್ಲಾಧಿಕಾರಿ ನಡೆ... ಗ್ರಾಮದ ಕಡೆ' ಯೋಜನೆಯು ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಇಂದು ಬೆಳಿಗ್ಗೆ ಬ್ರಹ್ಮಾವರ ತಾಲೂಕಿನ 15 ನಾಲ್ಕೂರು ಗ್ರಾಮಕ್ಕೆ ಭೇಟಿ ನೀಡಿದರು. ಈ ಮೂಲಕ ರಾಜ್ಯದಲ್ಲೇ ಈ ಯೋಜನೆಗೆ ಮೊಟ್ಟಮೊದಲ ಬಾರಿ ಉಡುಪಿಯಲ್ಲಿ ಚಾಲನೆ ಸಿಕ್ಕಿದಂತಾಗಿದೆ.
ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಅವರಿಗೆ ಗ್ರಾಮಸ್ಥರು ಆತ್ಮೀಯವಾಗಿ ಪೂರ್ಣಕುಂಭ ಸ್ವಾಗತ ನೀಡಿದರು. ಗ್ರಾಮದ ಸ್ಥಳೀಯ ಶಾಲೆಗೆ ತೆರಳಿದ ಜಿಲ್ಲಾಧಿಕಾರಿ ಜಿ.ಜಗದೀಶ್, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಮಕ್ಕಳು ಭವಿಷ್ಯದಲ್ಲಿ ಏನಾಗಬಯಸುತ್ತೀರಿ ಎಂದು ವಿಚಾರಿಸಿ ಅವರಿಂದ ಉತ್ತರ ಪಡೆದರು. ಉತ್ಸಾಹದಿಂದಲೇ ಮಕ್ಕಳಿಗೆ ಪಾಠ ಮಾಡಿದರು. ಬಳಿಕ ಗ್ರಾಮಸ್ಥರ ಜೊತೆ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿ ಭೇಟಿ ಸಂದರ್ಭ ಜೊತೆಗಿದ್ದರು.
Kshetra Samachara
30/01/2021 04:35 pm