ಕುಂದಾಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ .
ಹೌದು, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಕ್ಲಾಡಿ ಗ್ರಾಪಂ ಉಡುಪಿ ಜಿಲ್ಲೆಯಲ್ಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಸಿ ಸಾಧನೆ ಮಾಡಿದ ಪಂಚಾಯತ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ!
"2021-2022ನೇ ಸಾಲಿನಲ್ಲಿ ಹಕ್ಲಾಡಿ ಗ್ರಾಪಂ ಉದ್ಯೋಗ ಖಾತರಿ ಯೋಜನೆಯಡಿ ಉತ್ತಮ ಸಾಧನೆ ಮಾಡಿದ್ದು, ಕೇವಲ ವೈಯಕ್ತಿಕ ಕಾಮಗಾರಿಗಳು ಮಾತ್ರವಲ್ಲದೆ, ಉದ್ಯೋಗ ಸೃಷ್ಟಿಸುವ ಹಿನ್ನೆಲೆಯಲ್ಲಿ ಸಮುದಾಯ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಿದ್ದೇವೆ. ಸಮುದಾಯ ಕಾಮಗಾರಿಗಳಲ್ಲಿ 250ಕ್ಕೂ ಹೆಚ್ಚು ಮಹಿಳೆಯರು ದುಡಿದು, ಬದುಕು ಕಟ್ಟಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿದ್ದೇವೆ" ಎಂದು ಗ್ರಾಪಂ ಅಧ್ಯಕ್ಷ ಚೇತನ್ ಮೊಗವೀರ ʼಪಬ್ಲಿಕ್ ನೆಕ್ಸ್ಟ್ʼ ಜೊತೆ ಖುಷಿ ಹಂಚಿಕೊಂಡರು.
Kshetra Samachara
18/12/2021 07:33 pm