ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ರಾಣಿ ಅಬ್ಬಕ್ಕ ಆಸ್ಪತ್ರೆ ಎಂಬುದಾಗಿ ಮರು ನಾಮಕರಣ ಮಾಡುವ ಬಗ್ಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಅವರು ಮಂಗಳೂರು ಮಹಾನಗರ ಪಾಲಿಕೆ ಮತ್ತು ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ನಡೆದ ನಮ್ಮ ಅಬ್ಬಕ್ಕ - 2022 ಅಮೃತ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ ಅಬ್ಬಕ್ಕ ಪೋರ್ಚುಗೀಸರ ವಿರುದ್ಧ ಹೋರಾಡಿದ ಧೀರ ಮಹಿಳೆ. ನಮ್ಮ ಯುವ ಪೀಳಿಗೆ ಅವರಿಂದ ಸ್ಫೂರ್ತಿ ಪಡೆಯ ಬೇಕು. ಅಬ್ಬಕ್ಕ ಅವರಂತಹ ದೃಢ ಮನಸ್ಸಿನ, ಧೀರ ಮಹಿಳೆಯರು ನಮ್ಮಲ್ಲಿಯೂ ಬರಬೇಕು ಎಂದ ಅವರು, ರಾಣಿ ಅಬ್ಬಕ್ಕ ಅವರ ಹೆಸರು ನಮಗೆ, ನಮ್ಮ ರಾಜ್ಯಕ್ಕೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಗೊತ್ತಾಗಬೇಕು ಎಂದರು.
Kshetra Samachara
27/02/2022 03:18 pm