ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಉಮಾನಾಥ ಕೋಟ್ಯಾನ್

ಮೂಡುಬಿದಿರೆ: ಕೆಲವು ವರ್ಷಗಳಿಂದ ಕಡತಗಳು ಬಾಕಿ ಇದ್ದು, ಅವುಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಇಂದು ಚಾಲನೆ ನೀಡಲಾಗಿದೆ. ಸರಕಾರ ಅನುಷ್ಟಾನಗೊಳಿಸುವ ಯಾವುದೇ ಯೋಜನೆಗಳು ಪೂರ್ಣಗೊಳ್ಳಬೇಕಾದರೆ ಕೇವಲ ಜನಪ್ರತಿನಿಧಿಗಳು ಮಾತ್ರವಲ್ಲ ಗ್ರಾಮಲೆಕ್ಕಿಗರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧ್ಯಕ್ಷರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದರು.

ತಾಲೂಕಿನ ಪಡುಮಾರ್ನಾಡು ಗ್ರಾಮದ ಬ್ರಹ್ಮಶ್ರೀ ಮುಗೇರಕಳ ದೈವಸ್ಥಾನದ ಬಳಿ ರೈತರಿಗೆ ಪಹಣಿ, ಜಮೀನಿನ ನಕ್ಷೆ, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ರೈತರ‌ಮನೆಬಾಗಿಲಿಗೆ ಉಚಿತವಾಗಿ ತಲುಪಿಸುವ 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಎಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Edited By : Manjunath H D
Kshetra Samachara

Kshetra Samachara

12/03/2022 09:00 pm

Cinque Terre

5.13 K

Cinque Terre

0

ಸಂಬಂಧಿತ ಸುದ್ದಿ