ಬಂಟ್ವಾಳ: ಇಂಧನ, ವಿದ್ಯುತ್ ಬೆಲೆ ಏರಿಕೆಯ ಮೂಲಕ ಜೀವನಾವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ ಕೃಷಿಕರು, ಕಾರ್ಮಿಕರು, ಜನಸಾಮಾನ್ಯರ ಬದುಕನ್ನು ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಬಿಜೆಪಿ ಸರಕಾರ ದುಸ್ತರಗೊಳಿಸಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಬೆಲೆ ಏರಿಕೆ ಆದಾಗಲೂ ಬಿಜೆಪಿಯವರು ರಸ್ತೆಯಲ್ಲೇ ಅಡುಗೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದ್ದರು ಸರಕಾರ ತೆಗೆದು ಹಾಕಬೇಕು ಎಂದು ಆಗ್ರಹಿಸುತ್ತಿದ್ದರು ಎಂದು ನೆನಪಿಸಿದ ರೈ ಈಗ ಜನರ ಹಿತವನ್ನು ಕಾಪಾಡುವ ಸರಕಾರವೇ ಇಲ್ಲವಾಗಿದೆ ಎಂದರು. ಹಣ ಮಾಡುವುದಕ್ಕಾಗಿ ಸರಿ ಇರುವ ರಸ್ತೆಗಳಿಗೇ ಮತ್ತೆ ಡಾಮಾರು ಹಾಕುವ ಕಾರ್ಯ ನಡೆಯುತ್ತಿದ್ದು, ಬದುಕು ಕಟ್ಟಿಕೊಳ್ಳುತ್ತಿದ್ದವರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್‌ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ.ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಬಿ.ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಮೊದಲಾದವರಿದ್ದರು.
Kshetra Samachara
09/04/2022 06:08 pm