ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ನಗರಸಭೆ ಮೀಟಿಂಗ್: ವಾರಾಹಿ ಕಾಮಗಾರಿ ಬಗ್ಗೆ ಅಧಿಕಾರಿಗಳಿಗೆ ವಾರ್ನಿಂಗ್ !

ಉಡುಪಿ : ಉಡುಪಿ ನಗರಸಭೆಯ ಸಾಮಾನ್ಯ ಸಭೆ ಅಧ್ಯಕ್ಷೆ ಸಮಿತ್ರ ನಾಯಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ವಾರಾಹಿ ನದಿ ನೀರಿನ ಕಾಮಗಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ಉಡುಪಿ ನಗರಸಭೆಯಲ್ಲಿ ಪಕ್ಷಭೇದ ಮರೆತು ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಸಭೆಯಲ್ಲಿ ನಡೆಯಿತು.

ವಾರಾಹಿ ನದಿ ನೀರಿನ ಕಾಮಗಾರಿಯಿಂದಾಗಿ ನಗರಸಭೆ ವ್ಯಾಪ್ತಿಯ ಹೆಚ್ಚಿನ ಕಡೆಗಳಲ್ಲಿ ಅರ್ಧಂಬರ್ಧ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉದ್ಭವಿಸಿವೆ. ಒಂದು ಕಡೆ ಕಾಮಗಾರಿ ನಡೆಸಿ ಅರ್ಧಕ್ಕೇ ಬಿಟ್ಟು ಇನ್ನೊಂದು ಕಡೆ ಕಾಮಗಾರಿಯನ್ನು ನಡೆಸುತ್ತಿದ್ದು ವಾರಾಹಿ ಅಧಿಕಾರಿಗಳ ವಿರುದ್ಧ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ವಾರಾಹಿ ಯೋಜನೆಯ ಮುಖ್ಯ ಇಂಜಿನಿಯರ್ ಅಥವಾ ಅಧಿಕಾರಿಯೇ ಸಭೆಗೆ ಬರೆಯಬೇಕೆಂದು ಸದಸ್ಯರು ಪಟ್ಟು ಹಿಡಿದರು. ಮುಂದಿನ ಸಭೆಯಲ್ಲಿ ಅಧಿಕಾರಿಯವರನ್ನು ಕರೆಸುವ ಬಗ್ಗೆ ನಿರ್ಣಯಿಸಲಾಯಿತು.

ಇನ್ನು ಕಿನ್ನಿಮೂಲ್ಕಿಯ ವಾರ್ಡ್ ನ ಚಂದು ಮೈದಾನದಲ್ಲಿ ಅನಗತ್ಯ ಕಾಮಗಾರಿ ನಡೆಸಲಾಗಿದೆ ಎಂದು ಸದಸ್ಯ ಕೃಷ್ಣರಾವ್ ಕೊಡಂಚ ಆರೋಪಿಸಿದರು. ಈ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿಗೆ ಸಭೆ ಸಾಕ್ಷಿಯಾಯಿತು. ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇನ್ನಿತರ ವಿಚಾರದ ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಿತು.

Edited By : Nagesh Gaonkar
Kshetra Samachara

Kshetra Samachara

28/04/2022 04:51 pm

Cinque Terre

14.52 K

Cinque Terre

0

ಸಂಬಂಧಿತ ಸುದ್ದಿ