ಉಡುಪಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಅವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವರು ,ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ, ಬಿಜೆಪಿ ಅಭಿವೃದ್ಧಿ ನೋಡಿ ಬೇರೆ ಪಕ್ಷದವರು ಬರುತ್ತಿದ್ದಾರೆ.ಸ್ಥಳೀಯ ಕಾರ್ಯಕರ್ತರು ಮತ್ತು ಮುಖಂಡರು ಒಪ್ಪಿಗೆ ಪಡೆದು ಅವರನ್ನು ಸೇರ್ಪಡೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನಾಳೆ ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದ್ದು ಇದಕ್ಕೆ ಬೇಕಾದ ತಯಾರಿಗಳನ್ನು ಮಾಡಿದ್ದೇವೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ಇದೊಂದು ಮಹತ್ವದ ಸಭೆಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.
Kshetra Samachara
09/05/2022 06:58 pm