ಪುತ್ತೂರು: ತಡಲ ತಡಿ ಭಾರ್ಗವ ಡಾ. ಶಿವರಾಮ ಕಾರಂತರ ಕರ್ಮಭೂಮಿ ಪುತ್ತೂರಿನ ಕಾರಂತ ಬಾಲವನಕ್ಕೆ ಇಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕತಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಪುತ್ತೂರಿನ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಚಿವರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗು ಅಧಿಕಾರಿಗಳು ಬರಮಾಡಿಕೊಂಡರು.
ಶಿವರಾಮ ಕಾರಂತರ ಬಾಲವನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಶಿವರಾಮ ಕಾರಂತರನ್ನು ಯುವ ಪೀಳಿಗೆಗೆ ಪರಿಚಯಿಸುವ ಕಾರ್ಯ ನಡೆಯಲಿದೆ. ಈ ನಿಟ್ಟಿನಲ್ಲಿ ಶಿವರಾಮ ಕಾರಂತರ ಜೀವನದ ಕಥೆ ಹೇಳುವ ಧ್ವನಿ ಮತ್ತು ಚಿತ್ರದ ಸ್ಟುಡಿಯೋ ಒಂದನ್ನು ನಿರ್ಮಿಸುವ ಕುರಿತಂತೆ ಸಭೆಯಲ್ಲಿ ಅನಿಸಿಕೆಗಳು ಬಂದ ಹಿನ್ನಲೆಯಲ್ಲಿ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಗಳಿಗೆ ಸಚಿವರು ಸೂಚಿಸಿದ್ದಾರೆ.
ಬಾಲವನ ಭೇಟಿ ಬಳಿಕ ಸಚಿವರು ಪುತ್ತೂರು ತಾಲೂಕಿನ ಅಕ್ರಮ-ಸಕ್ರಮದ ಮೂಲಕ ಭೂಮಿ ಪಡೆದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಚಿವರ ಜೊತೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿ.ಇ.ಒ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
PublicNext
17/05/2022 05:51 pm