ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'RSS ಮೂಲ ಹುಡುಕುವ ಮೊದಲು ಸೋನಿಯಾ ಗಾಂಧಿ ಮೂಲ ಹುಡುಕಿ'

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ಮೂಲದ ಬಗ್ಗೆ ಪ್ರಶ್ನೆ ಎತ್ತಿದ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೆ.ಡಿ.ಎಸ್‌ನಲ್ಲಿದ್ದಾಗ ಸೋನಿಯಾ ಗಾಂಧಿ ಅವರ ಕುರಿತು ಏಕವಚನದಲ್ಲಿ ಮಾತನಾಡುತ್ತಿದ್ದರು. ಈಗ ಅವರದ್ದೇ ಪಕ್ಷಕ್ಕೆ ಹೋಗಿ ಮಹಾತಾಯಿ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಮಹಾತಾಯಿ, ಮಹಾನಾಯಕಿ ಎಂದು ಒಪ್ಪಿಕೊಳ್ಳುವ ದಯನೀಯ ಸ್ಥಿತಿಯಲ್ಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ಮೂಲ ಹುಡುಕುವ ಮೊದಲು ಸೋನಿಯಾ ಗಾಂಧಿಯವರ ಮೂಲ ಹುಡುಕಲಿ. ಕರ್ನಾಟಕದ ಜನತೆಗೆ ಇದನ್ನು ಮೊದಲು ತಿಳಿಸಿ, ಆಮೇಲೆ ಬೇರೆಯವರ ಬಗ್ಗೆ ಪ್ರಶ್ನೆ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

Edited By : Somashekar
Kshetra Samachara

Kshetra Samachara

28/05/2022 05:03 pm

Cinque Terre

6.36 K

Cinque Terre

3

ಸಂಬಂಧಿತ ಸುದ್ದಿ