ಉಡುಪಿ: ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದೇನೆ. ಭೂಕಂಪ ಮತ್ತು ಭೂಕುಸಿಗೊಂಡ ಸ್ಥಳಗಳ ವೀಕ್ಷಣೆ ನಡೆಸಿದ್ದೇನೆ. 4 ಸಂಸ್ಥೆಗಳಿಂದ ಅಧ್ಯಯನ ಮಾಡಲು ಸೂಚನೆ ಕೊಟ್ಟಿದ್ದು,ಕಡಲ್ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆಗೆ ಆಗಮಿಸಿದ ಅವರು ಮಾಧ್ಯಮದ ಜೊತೆ ಮಾತನಾಡಿದರು.ಮೂರು ಜಿಲ್ಲೆಗಳ ಮಳೆಹಾನಿಯ ಬಗ್ಗೆ ಸಮಗ್ರ ಚರ್ಚೆ ನಡೆಸುತ್ತೇವೆ.
ತುರ್ತು ಮತ್ತು ದೀರ್ಘಕಾಲೀನ ಪರಿಹಾರದ ಬಗ್ಗೆ ಚರ್ಚೆ ನಡೆಸುತ್ತೇವೆ. ಸಭೆ ನಂತರ ಬೈಂದೂರು ತಾಲೂಕು ಮತ್ತು ಕಾಪು ತಾಲೂಕಿಗೆ ಭೇಟಿ ಕೊಡುತ್ತೇನೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಹತ್ತು ದಿನ ಬಿಟ್ಟು ಭೇಟಿ ನೀಡಿ ಅಲ್ಲಿಯ ನೆರವು ಮತ್ತು ಅಭಿವೃದ್ಧಿ ಕೆಲಸದ ಬಗ್ಗೆ ಸೂಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
PublicNext
13/07/2022 01:21 pm