ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ವಸತಿ ರಹಿತರಿಗೆ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಸುಮಾರು 460 ಮನೆಗಳು ನಿರ್ಮಾಣಗೊಳ್ಳುತ್ತಿವೆ.
ಜಾಗದ ಸಮಸ್ಯೆಯಿಂದಾಗಿ, ಬಡವರಿಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಫ್ಲ್ಯಾಟ್ ಮಾದರಿ ಮನೆ ನಿರ್ಮಿಸಿ ಬಡ, ಮಧ್ಯಮವರ್ಗದವರಿಗೆ ನೀಡಲಾಗುತ್ತಿದೆ.
ಈ ವಸತಿ ಸಮುಚ್ಚಯದ ಕಾಮಗಾರಿ ಬಹುತೇಕ ಪೂರ್ಣಗೊಳ್ಳುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದು ವಾಸಕ್ಕೆ ಸಿದ್ಧಗೊಳ್ಳಲಿದೆ. ಇವತ್ತು ಶಾಸಕ ರಘುಪತಿ ಭಟ್ ಭೇಟಿ ನೀಡಿ ಕಾಮಗಾರಿ ಪ್ರಗತಿ ವೀಕ್ಷಣೆ ಮಾಡಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
Kshetra Samachara
29/07/2022 08:30 pm