ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯ ಅಜ್ಜಿ, ಕೊಡ್ಲಾಡಿ, ಅಂಪಾರು, ಕರ್ಕುಂಜೆ, ಸಿದ್ದಾಪುರ ಹಾಗೂ ಇನ್ನಿತರ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಇಂದು ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ರೈತರ ನೀರಾವರಿ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಣಯ ಕೈಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ವ್ಯಾಪ್ತಿಯ ಸಿದ್ದಾಪುರ, ಅಂಪಾರು, ಅಜ್ಜಿ, ಮತ್ತು ಕೊಡ್ಲಾಡಿ ಗ್ರಾಮಗಳ ಪ್ರದೇಶವು ವಾರಾಹಿ ಬಲದಂಡೆ ನಾಲೆಯ ಬಲ ಭಾಗದಲ್ಲಿ ಬರುವುದರಿಂದ ಈ ಭಾಗದ ರೈತರು ನೀರಾವರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.
ಈ ಪ್ರದೇಶದ ಬಹುಭಾಗವು ಕೃಷಿ ಭೂಮಿಯಾಗಿದ್ದು ನೀರಾವರಿಯು ಅಗತ್ಯವಾಗಿರುವುದರಿಂದ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ನೀರಾವರಿ ಸೌಲಭ್ಯವನ್ನು ಒದಗಿಸುವಂತೆ ಮನವಿ ಮಾಡಿದರು ಇದೀಗ ಈ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರಕಿದೆ.
Kshetra Samachara
25/08/2022 10:55 pm