ಮಂಗಳೂರು: ಬಿಜೆಪಿಯ ಸಚಿವರು, ಶಾಸಕರೇ ಭ್ರಷ್ಟಾಚಾರದ ಬ್ರೋಕರ್‌ಗಳಾಗಿದ್ದಾರೆಂದು ಮಂಗಳೂರಿನಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿ, ಬಿಜೆಪಿಯ ಯೋಗೇಶ್ವರ್, ವಿಶ್ವನಾಥ್, ಯತ್ನಾಳ್, ರೇಣುಕಾಚಾರ್ಯ, ಮಾಧುಸ್ವಾಮಿಯವರುಗಳೇ ಬಿಜೆಪಿ ವಿರುದ್ಧವೇ ಟೀಕೆ ಮಾಡುತ್ತಿದ್ದಾರೆ. ಕೆ.ಎಸ್.ಈಶ್ವರಪ್ಪ ಗವರ್ನರ್ ಅವರಗೇ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿ V/S ಬಿಜೆಪಿಯೊಳಗೇ ಜಗಳವಾಗುತ್ತಿದೆ. ಕರಾವಳಿಯಲ್ಲಿ ನಳಿನ್ ಕುಮಾರ್ ಕಟೀಲು ಪವರ್ ಫುಲ್ ಎಂದು ಭಾವಿಸಿದ್ದೆ. ಆದರೆ ಇಲ್ಲಿ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳಿದರು.
ಬಿಜೆಪಿಯ ಎಷ್ಟು ನಾಯಕರ ಮಕ್ಕಳು ಗೋಶಾಲೆಯಲ್ಲಿ ಕೆಲಸ ಮಾಡುತ್ತಾರೆ. ಎಷ್ಟು ಬಿಜೆಪಿ ಎಂಎಲ್‌ಎಗಳು ಗೋ ಮೂತ್ರ ಕುಡಿಯುತ್ತಾರೆ. ಬಡವರು, ಹಿಂದುಳಿದ ಮಕ್ಕಳಿಗೆ ಕೇಸರಿ ಶಾಲ್ ಹಾಕಿ ಧರ್ಮ ರಕ್ಷಣೆಗೆ ಕಳುಹಿಸುತ್ತಾರೆ. ಮಾತೆತ್ತಿದ್ದರೆ ಯುಪಿ ಮಾಡೆಲ್ ಎಂದು ಹೇಳುತ್ತಾರೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಪ್ರಯೋಜನ ಆಗಿಲ್ಲ. ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ. ಮೊನ್ನೆ ಮೋದಿಯವರು ಮಂಗಳೂರಿಗೆ ಬಂದಾಗ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುತ್ತಾರೆ ಎಂಬ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಎಂದು ಕಿಡಿಕಾರಿದರು.
Kshetra Samachara
06/09/2022 04:28 pm