ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮಕ್ಕೆ ಎರಡನೇ ಬಾರಿ ಅಧ್ಯಕ್ಷರಾಗಿ 'ಸಹಕಾರ ರತ್ನ' ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಡಾ.ಐಕಳಬಾವ ದೇವಿಪ್ರಸಾದ ಶೆಟ್ಟಿ ಹೇಳಿದರು.
ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಹೊಸ ಆಯಾಮವನ್ನು ಈ ಕ್ಷೇತ್ರಕ್ಕೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಗುರುತಿಸಿ ಸೆ.24ರಂದು ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಈ ಅಭಿನಂದನಾ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲಾಗುತ್ತದೆ.
ಈ ಸಮಾರಂಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಭಾರತದ ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಗಮದ ನಿರ್ದೇಶಕ ಡಾ.ಐಕಳಬಾವ ದೇವಿಪ್ರಸಾದ ಶೆಟ್ಟಿ ಬೆಳಪು ಉಪಸ್ಥಿತಿ ಇರಲಿದೆ.
Kshetra Samachara
22/09/2022 04:53 pm