ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ಚತುಷ್ಪಥ ರಸ್ತೆ ಕಾಮಗಾರಿಗೆ ಸಚಿವೆ ಶೋಭಾ ಕರಂದ್ಲಾಜೆ ಶಿಲಾನ್ಯಾಸ

ಹೆಬ್ರಿ : ಕರಾವಳಿಯನ್ನು ಉತ್ತರಭಾರತ ಮತ್ತು ಉತ್ತರ ಕರ್ನಾಟಕಕ್ಕೆ ಜೋಡಿಸುವ ಚತುಷ್ಪಥ ರಸ್ತೆ ಕಾಮಗಾರಿ ಶಿಲಾನ್ಯಾಸ ಇಂದು ನೆರವೇರಿದೆ. ಸುಮಾರು 355.72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣಗೊಳ್ಳುತ್ತಿದೆ. ರಾಷ್ಟ್ರೀಯ ಹೆದ್ದಾರಿ 169 A ಹೆಬ್ರಿ - ಪರ್ಕಳ - ಕರಾವಳಿ ಬೈಪಾಸ್ - ಮಲ್ಪೆ ಚತುಷ್ಪಥ ರಸ್ತೆ ಕಾಮಗಾರಿಯಿಂದ ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ.ಈ ರಸ್ತೆ ಚತುಷ್ಪಥ ರಸ್ತೆಯಾಗಿ ಮಾರ್ಪಾಡಾಗಬೇಕೆಂಬ ಬೇಡಿಕೆ ಬಹಳ ವರ್ಷಗಳಿಂದ ಇತ್ತು .ಇದೀಗ ಕೇಂದ್ರ ಸರಕಾರ ಜನರ ಬೇಡಿಕೆಯನ್ಬು ಈಡೇರಿಸಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಪೆರ್ಡೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸುಮಾರು 355.72 ಕೋಟಿ ರೂಪಾಯಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ 169 A ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

30/09/2022 05:40 pm

Cinque Terre

45.88 K

Cinque Terre

1

ಸಂಬಂಧಿತ ಸುದ್ದಿ