ಮುಲ್ಕಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿಯವರ ಹುಟ್ಟು ಹಬ್ಬದ ಪ್ರಯುಕ್ತ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮುಲ್ಕಿ ಬ್ಲಾಕ್ ಯೂತ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ನೇತೃತ್ವದಲ್ಲಿ ನೇತೃತ್ವದಲ್ಲಿ ಕೊರೊನ ಲಾಕ್ಡೌನ್ ನಿಂದ ಮುಂದೂಡಲಾಗಿದ್ದ ಬೃಹತ್ ರಕ್ತದಾನ ಶಿಬಿರ ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ರಕ್ತದಾನ ಶ್ರೇಷ್ಠ ದಾನ ವಾಗಿದ್ದು ರಕ್ತದಾನದ ಮೂಲಕ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಹಿರಿಯ ನಾಯಕರನ್ನು ಸ್ಮರಿಸೋಣ ಎಂದರು.
ಈ ಸಂದರ್ಭ ಕೆಪಿಸಿಸಿ ವಕ್ತಾರ ವಸಂತ ಬೆರ್ನಾಡ್ , ಮುಲ್ಕಿಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಶಿಮಂತೂರು, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು, ಮುಲ್ಕಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮುಲ್ಕಿ ನಪಂ ಸದಸ್ಯರಾದ ಪುತ್ತುಬಾವ, , ಯೋಗೀಶ್ ಕೋಟ್ಯಾನ್, ಮಂಜುನಾಥ ಕಂಬಾರ, ಮುನ್ನಾ ಯಾನೆ ಮಹೇಶ,ಹಳೆಯಂಗಡಿ ಗ್ರಾಪಂ ಸದಸ್ಯರಾದ ಧನರಾಜ ಸಸಿಹಿತ್ಲು,ಅಬ್ದುಲ್ ಅಜೀಜ್, ಮತ್ತಿತರರು ಉಪಸ್ಥಿತರಿದ್ದರು. ಧರ್ಮಾನಂದ ಶೆಟ್ಟಿಗಾರ್ ನಿರೂಪಿಸಿದರು.
Kshetra Samachara
31/07/2021 11:52 am