ಮಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಂಗಳೂರಿನಲ್ಲಿ ರಾಜಕೀಯ ಸಮಾರಂಭ ನಡೆಸಲಾಗಿದೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಪದಗ್ರಹಣ ಸಮಾರಂಭ ನಡೆದಿದ್ದು, ರಾಜಕೀಯ ಸಮಾರಂಭಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಲೆಕ್ಕಿಸದೇ ಕಾರ್ಯಕ್ರಮ ನಡೆಸಲಾಗಿದೆ.
ಸಾಮಾಜಿಕ ಅಂತರ ಮರೆತು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸೇರಿದ್ದರು. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಶಾಸಕರಾದ ಐವನ್ ಡಿಸೋಜಾ, ಮೊಯಿದ್ದೀನ್ ಬಾವಾ ಸೇರಿ ಹಲವರು ಭಾಗಿಯಾಗಿದ್ದರು. ವೇದಿಕೆಯಲ್ಲೇ ಸಾಮಾಜಿಕ ಅಂತರವಿಲ್ಲದೇ ಹಲವು ಕಾಂಗ್ರೆಸ್ ನಾಯಕರು ಸೇರಿದ್ದು, ಸರಿಯಾಗಿ ಮಾಸ್ಕ್ ಕೂಡ ಧರಿಸದೇ ಕಾಂಗ್ರೆಸ್ ಕಚೇರಿಯಲ್ಲಿ ಜನ ಜಾತ್ರೆಯಂತಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಕಾರ್ಯಕ್ರಮ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಆದರೂ ಕೂಡಾ ಡಿಸಿ ಆದೇಶ ಉಲ್ಲಂಘಿಸಿ ಅದ್ದೂರಿ ಕಾಂಗ್ರೆಸ್ ಸಮಾವೇಶ ನಡೆಸಲಾಗಿದೆ.
Kshetra Samachara
01/08/2021 06:43 pm