ಮೂಡಬಿದ್ರೆ: ಸವಿತಾ ಸಮಾಜ ಮೂಡುಬಿದಿರೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು ವತಿಯಿಂದ ಕೋವಿಡ್-19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಅಸಂಘಟಿತ ಕ್ಷೌರಿಕ ವೃತ್ತಿಯ ಫಲಾನುಭವಿಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿಮೂಡುಬಿದಿರೆ ಸವಿತಾ ಸಮಾಜದ ಅಧ್ಯಕ್ಷ ಪದ್ಮನಾಭ ಭಂಡಾರಿ, ಗೌರವಾಧ್ಯಕ್ಷ ಆನಂದ ಭಂಡಾರಿ, ಕಾರ್ಯದರ್ಶಿ ಸಂತೋಷ್ ಕುಮಾರ್, ಕೋಶಾಧಿಕಾರಿ ರಘುಚಂದ್ರ ಭಂಡಾರಿ, ಉಪಾಧ್ಯಕ್ಷ ಗಣೇಶ್ ಭಂಡಾರಿ ಹಾಗೂ ಸವಿತಾ ಸಮಾಜ ಮೂಡುಬಿದಿರೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
Kshetra Samachara
17/08/2021 03:42 pm